ಮಂಗಳೂರು: 26 ಗಂಟೆಗಳ ಕಾಲ ನಿಷೇಧಾಜ್ಞೆ ವಿಧಿಸಿ ಆದೇಶ ► ಇದ್ದಕ್ಕಿದ್ದಂತೆ ನಿಷೇಧಾಜ್ಞೆ ಹೊರಡಿಸಲು ಕಾರಣವಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು ಬೂದಿ ಮುಚ್ಚಲಾಯಿತು ಕೆಂಡದಂತಿದ್ದು, ಯಾವುದೇ ಸಂದರ್ಭದಲ್ಲಿ ರಾಜಕೀಯ ಹಾಗೂ ಕೋಮು ವಿಚಾರಗಳು ಗಲಭೆಯ ವಾತಾವರಣಕ್ಕೆ ಬದಲಾಗುವ ಸಾಧ್ಯತೆಯಿದೆ. ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪರ – ವಿರೋಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದರಿಂದ ಮೇ 19 ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮೇ 20 ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೆ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಆದೇಶಿಸಲಾಗಿದೆ.

Also Read  ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವನ ಮಹೋತ್ಸವ

error: Content is protected !!
Scroll to Top