ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!



(ನ್ಯೂಸ್‌ ಕಡಬ) newskadaba.com,  ಮೇ.09:  ​ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ.







ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ AIB ಆಧಾರಿತ ತೆರಿಗೆ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ರಾಜ್ಯವಾಗಿದೆ.






ಸರ್ಕಾರವು ಏಪ್ರಿಲ್ 18ರಂದು ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿತ್ತು. ಬಂದ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) (2ನೇ ತಿದ್ದುಪಡಿ) ನಿಯಮಗಳು, 2026 ಅನ್ನು ಅಂತಿಮಗೊಳಿಸಲಾಗಿದೆ.

ಹೊಸ ನೀತಿಯ ಪ್ರಕಾರ, ಬ್ರಾಂಡಿ, ವಿಸ್ಕಿ, ರಮ್, ಜಿನ್, ಬಿಯರ್, ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ “ಆಲ್ಕೋಹಾಲ್ ಪ್ರಮಾಣ” ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಈಗಿರುವ 16 ಅಬಕಾರಿ ಸ್ಲ್ಯಾಬ್‌ಗಳನ್ನು ಕಡಿತಗೊಳಿಸಿ ಕೇವಲ 8 ಸ್ಲ್ಯಾಬ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಅಬಕಾರಿ ಇಲಾಖೆಯ ಆದಾಯದಲ್ಲಿ ಪ್ರಮುಖ ಪಾತ್ರವಹಿಸುವ ಕಡಿಮೆ ದರದ ಮದ್ಯ ವಿಭಾಗದ ಮೇಲೆ ಈ ನೀತಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

error: Content is protected !!
Scroll to Top