(ನ್ಯೂಸ್ ಕಡಬ) newskadaba.com, ಮೇ.19:ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.









