ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ



(ನ್ಯೂಸ್‌ ಕಡಬ) newskadaba.com,  ಮೇ.23”   ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಡಿಜಿಟಲ್ ಮಾರ್ಕ್ಸ್‌ವಣ್ ಪತ್ರ ವ್ಯವಸ್ಥೆ ಜಾರಿಗೆ ಮುಂದಾಗಿದೆ.







ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿದಂತೆ ವಿವಿಧ ತರಗತಿಗಳ ಅಂಕಪಟ್ಟಿಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತಿದ್ದು, ಇದರಿಂದ ದಾಖಲೆಗಳ ಅಸಲಿತನವನ್ನು ತಕ್ಷಣವೇ ಪರಿಶೀಲಿಸಬಹುದಾಗಿದೆ. ನಕಲಿ ಅಂಕಪಟ್ಟಿ ತಡೆಗಟ್ಟುವ ಜೊತೆಗೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಡಿಜಿಟಲ್ ದಾಖಲೆ ವ್ಯವಸ್ಥೆ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ..






ಇದೇ ವೇಳೆ, ವಿದ್ಯಾರ್ಥಿಗಳ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಅಗತ್ಯವಿದ್ದಾಗ ಆನ್‌ಲೈನ್ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಇಲಾಖೆ ರೂಪಿಸುತ್ತಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ವೇಗವಾಗಿ ನಡೆಯಲು ಈ ಕ್ರಮ ಸಹಕಾರಿಯಾಗಲಿದೆ.

error: Content is protected !!
Scroll to Top