ಮಿತ್ತೂರು: ಕಂಟೈನರ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದ ಕಬ್ಬಿಣದ ಬೃಹತ್ ರೋಲ್ ► ಕಾರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಪ್ರಯಾಣಿಕರು



(ನ್ಯೂಸ್ ಕಡಬ) newskadaba.com ವಿಟ್ಲ, ಮೇ.19. ಕಂಟೈನರ್ ಲಾರಿಯೊಂದು ಪಲ್ಟಿಯಾಗಿ ಲಾರಿಯಿಂದ ಉರುಳಿದ ಕಬ್ಬಿಣದ ತುಂಡು ಕಾರಿನ ಮೇಲೆ ಬಿದ್ದ ಪರಿಣಾಮ ಕಾರನಲ್ಲಿದ್ದವರು ಪವಾಡ ಸದೃಶ ಪಾರಾದ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ರೂರು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.







ಮಂಗಳೂರಿನಿಂದ ಮೈಸೂರು ಕಡೆಗೆ ಕಬ್ಬಿಣದ ರೋಲ್ ನ್ನು ಕೊಂಡೊಯ್ಯುತ್ತಿದ್ದ ಬೃಹತ್ ಕಂಟೈನರ್ ಲಾರಿ ಮಿತ್ತೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಲಾರಿಯಲ್ಲಿದ್ದ ಬೃಹತ್ ಗಾತ್ರದ ಕಬ್ಬಿಣದ ರೋಲೊಂದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಅಂಬಾಸಿಡರ್ ಕಾರಿನ ಮೇಲೆ‌ ಬಿದ್ದಿದ್ದು, ಕಾರು ಚಾಲಕನ ಸಮಯಾವಧಾನತೆಯಿಂದ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top