(ನ್ಯೂಸ್ ಕಡಬ) newskadaba.com, ಮೇ.28: : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು
ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ಎರಡು ವರ್ಷ ಇದೆ. ಅಲ್ಲಿವರೆಗೆ ಕರ್ನಾಟಕ ಹಾಗೂ ನನ್ನ ಕ್ಷೇತ್ರದ ಜನತೆ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಆ ಬಗ್ಗೆ ಶಾಸಕಾಂಗ ಪಕ್ಷದ ಸಭೆ ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯ ಕೊನೆಯಲ್ಲಿ ಎಲ್ಲರೂ ಕೈ ಹಿಡಿದು ಮೇಲಕ್ಕೆ ಎತ್ತಿ ಒಗ್ಗಟ್ಟು ಪ್ರದರ್ಶನ ಮಾಡಿದರು.













