ಬಂಟ್ವಾಳ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟಿಪ್ಪರ್ ► ಸವಾರ ಮೃತ್ಯು, ಸಹ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ.19. ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.







ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಪರ್ಲಿಯಾ ನಿವಾಸಿ ಇಕ್ಬಾಲ್(38) ಎಂದು ಗುರುತಿಸಲಾಗಿದೆ. ಸಹ ಸವಾರ ಬಶೀರ್(30) ಗಾಯಗೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಯಮಹಾ ಎಫ್ ಝಡ್ ಬೈಕ್ ನಲ್ಲಿ ಮಂಗಳೂರು ಕಡೆ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಟಿಪ್ಪರೊಂದು ಹಿಂದಿನಿಂದ ಬೈಕ್ ಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top