ವಿಟ್ಲ: ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ► ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.20. ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತುಪಡಿಸದೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ವಿಟ್ಲದಲ್ಲಿ ಶನಿವಾರ ರಾತ್ರಿ ನಡೆದಿದೆ.

ಶನಿವಾರ ರಾತ್ರಿ ವಿಟ್ಲ ಪರಿಸರದ ಕೆಲಿಂಜ ಎಂಬಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆಯ ವೇಳೆ ಬಿಜೆಪಿ ವಿರೋಧಿ ಘೋಷಣೆ ಕೂಗಿದ್ದು, ಈ ಸಂದರ್ಭದಲ್ಲಿ ಇಲ್ಲಿನ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ಪ್ರತಿಯಾಗಿ ಕಾಂಗ್ರೆಸ್ ವಿರೋಧಿ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ಸಂಭವಿಸಿದ್ದು, ದೊಣ್ಣೆ, ಸೋಡಾ ಬಾಟ್ಲಿಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಎರಡೂ ಕೋಮಿನ ಹಲವು ಯುವಕರು ಗಾಯಗೊಂಡಿದ್ದು, ವಿಟ್ಲ ಹಾಗೂ ಪುತ್ತೂರಿನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಸೂಕ್ತ ಬಂದೋಬಸ್ತ್ ನಡೆಸಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

Also Read  ನಂತೂರು: ಬಸ್-ಲಾರಿ-ಕಾರು ಸರಣಿ ಅಪಘಾತ ► ಮಹಿಳೆ ಮೃತ್ಯು, 15 ಕ್ಕೂ ಹೆಚ್ಚು ಮಂದಿಗೆ ಗಾಯ

error: Content is protected !!
Scroll to Top