ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಪಿಯುಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ.
ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ  (ಸಹಾಯವಾಣಿ ಸಂಖ್ಯೆ 8050770004) ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top