ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಜೂ. 03. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ.29ರಂದು ನಡೆಯಿತು.

 

ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಮಣ್ಯ ಭಟ್ ಉಪಸ್ಥಿತರಿದ್ದು, ಶಾಲೆಯಲ್ಲಿ ಹೇಳಿಕೊಡುವ ಸಂಸ್ಕಾರಗಳನ್ನು ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ. ಎಸ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು.

Scroll to Top