(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆ ಬೊಳಿಯಾರು, ಕಿನ್ಯ ಮತ್ತು ಕಕ್ಕಿಂಜೆ ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ ಇಲ್ಲಿಗೆ ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿದ್ಯಾರ್ಹತೆ ಮೇರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ 9886015827, 7760921446, 9902293646 ಮತ್ತು 9448912253 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ













