ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ



(ನ್ಯೂಸ್ ಕಡಬ) newskadaba.com ಜೂ. 03. ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ಜೂನ್ 5 ರಿಂದ ಜೂನ್ 8ರ ವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ ಮುನ್ಸೂಚನೆ ನೀಡಿದೆ.







ಯುರೋಪಿಯನ್ ಸೆಂಟರ್ ಫಾರ್ ಮೀಡಿಯಂ-ರೇಂಜ್ ವೆದರ್ ಫೋರ್ಕಾಸ್ಟ್ ಮಾದರಿಯನ್ನು ಆಧರಿಸಿ ಇಲಾಖೆ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ.






ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಭಾಗದಲ್ಲಿ ಜೂನ್ 3 ಮತ್ತು 4ರಂದು ಸಾಧಾರಣ ಮಳೆಯಾಗಲಿದ್ದು, ಜೂನ್ 5 ರಿಂದ ಮಳೆಯ ಅರ್ಭಟ ತೀವ್ರಗೊಳ್ಳಲಿದೆ. ಜೂನ್ 8ರ ವರೆಗೆ ಕರಾವಳಿ ವ್ಯಾಪಕವಾಗಿ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಜೂನ್ 8 ರವರೆಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಜೂನ್ 5 ರಿಂದ 8ರ ನಡುವೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಿನಗಳು ಕಳೆದಂತೆ ಹವಾಮಾನದ ಬದಲಾವಣೆಗಳಿಗೆ ತಕ್ಕಂತೆ ಮುನ್ಸೂಚನೆಯ ನಿಖರತೆ ಬದಲಾಗಬಹುದು. ಹೀಗಾಗಿ ಸಾರ್ವಜನಿಕರು ಮತ್ತು ರೈತರು ಮುಂದಿನ ಹವಾಮಾನ ನವೀಕರಣಗಳನ್ನು ಗಮನಿಸುತ್ತಿರಬೇಕು ಎಂದು ಕೆಎಸ್‌ಎನ್‌ಡಿಎಂಸಿ (KSNDMC) ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟಾರೆ ವಾರಾಂತ್ಯದಲ್ಲಿ ಪಶ್ಚಿಮ ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿರಲಿದೆ.

error: Content is protected !!
Scroll to Top