(ನ್ಯೂಸ್ ಕಡಬ) newskadaba.com ಜೂ. 04. ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









