ಜಿಲ್ಲೆಯ ಕೆಲವೆಡೆ ಘರ್ಷಣೆ ಹಿನ್ನೆಲೆ ► ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ‌

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20. ನಿಷೇಧಾಜ್ಞೆಯ‌ ನಡುವೆಯೂ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ‌ 22 ಮಂಗಳವಾರ ಬೆಳಗ್ಗೆ 10 ಗಂಟೆಯವರೆಗೆ 144 ಸೆಕ್ಷನ್ ನಿಷೇದಾಜ್ಞೆ ಮುಂದುವರಿಕೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ವಿಶ್ವಾಸಮತ ಯಾಚನೆ ಹಿನ್ನೆಲೆ ಶನಿವಾರದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತಾದರೂ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮೇ 22 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸಿ ಆದೇಶಿಸಿದ್ದಾರೆ.

error: Content is protected !!