ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 04.  2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಾಗಿದೆ.







ಕೋರ್ಸ್ ವಿವರ ಮತ್ತು ಪ್ರೋತ್ಸಾಹಧನ ಮೊತ್ತ
ಎಸ್.ಎಸ್.ಎಲ್.ಸಿ ಯಲ್ಲಿ  ಶೇ.60 ರಿಂದ 74.99 ಅಂಕ ಪಡೆದವರಿಗೆ 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ, ಪಿ.ಯು.ಸಿ, ಪಾಲಿಟೆಕ್ನಿಕ್ ಡಿಪ್ಲೊಮಾ- 20 ಸಾವಿರ,  ಪದವಿ( ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಬಿ.ಪಿ.ಎಡ್- 25 ಸಾವಿರ, ಸ್ನಾತ್ತಕೋತ್ತರ ಪದವಿ ( ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಐ.ಎಫ್.ಎ, ಎಂ.ಎಡ್, ಎಂ.ಪಿ.ಎಡ್- 30 ಸಾವಿರ, ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್  ವಿದ್ಯಾರ್ಥಿಗಳಿಗೆ 35 ಸಾವಿರ  ಪ್ರೋತ್ಸಾಹಧನ ನೀಡಲಾಗುತ್ತದೆ.
ಪ್ರೋತ್ಸಾಹಧನಕ್ಕೆ ಆನ್‍ಲೈನ್ swdservices.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಕಛೇರಿ (ದೂರವಾಣಿ ಸಂಖ್ಯೆ: 0824-2451237 / 9480843030) ಸಂಪರ್ಕಿಸಬಹುದು ಎಂದು  ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top