ಸಾಂಸ್ಕೃತಿಕ ತಂಡಗಳಿಗೆ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಅವಕಾಶ



(ನ್ಯೂಸ್ ಕಡಬ) newskadaba.com ಜೂ. 04.  ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (Indian Council Cultural Relations) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಐ.ಸಿ.ಸಿ.ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾ ತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ (Empanel) ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶವಾಗುತ್ತದೆ.
ಆದ್ದರಿಂದ ರಾಜ್ಯದಲ್ಲಿನ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಯಾ  ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಗೆ ಜೂನ್  12 ರೊಳಗೆ ಸಲ್ಲಿಸಿ ನೋಂದಾಯಿಸಬೇಕು. ನಮೂನೆಯನ್ನು ಇಲಾಖೆಯ ವೆಬ್‍ಸೈಟ್ www.kannadasiri. karnataka.gov.in ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.







error: Content is protected !!
Scroll to Top