ಚೆಸ್ ಟೂರ್ನಮೆಂಟ್ 19 ವರ್ಷಗಳ ಹಿಂದಿನ ವಿಶ್ವನಾಥ ಆನಂದ್ ರವರ ದಾಖಲೆ ಮುರಿದ ಪ್ರಜ್ಞಾನಂದ



(ನ್ಯೂಸ್ ಕಡಬ) newskadaba.com ಜೂ. 04. ನಾರ್ವೆ ಚೆಸ್ 2026 ಟೂರ್ನಮೆಂಟ್ನಲ್ಲಿ ಭಾರತದ ಯುವ ಚೆಸ್ ತಾರೆ 20 ವರ್ಷದ ಆರ್. ಪ್ರಜ್ಞಾನಂದ ಇತಿಹಾಸ ಸೃಷ್ಟಿಸಿದ್ದಾರೆ.







ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಮುರಿದಿದ್ದಾರೆ. ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್ನಲ್ಲಿ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಎರಡು ಬಾರಿ ಮಣಿಸಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪ್ರಜ್ಞಾನಂದ ಪಾತ್ರರಾಗಿದ್ದಾರೆ.






ಮೇ 27, 2026ರಂದು ಪ್ರಜ್ಞಾನಂದ ಬಿಳಿ ದಾಳಗಳೊಂದಿಗೆ ಆಡಿ ಕಾರ್ಲ್ಸನ್ಗೆ ಮೊದಲ ಆಘಾತ ನೀಡಿದ್ದರು. ಜೂನ್ 2, 2026 ರಂದು ಕಪ್ಪು ದಾಳಗಳೊಂದಿಗೆ ಅದ್ಭುತ ಪ್ರದರ್ಶನ ನೀಡಿ ಕಾರ್ಲ್ಸನ್ ಅವರನ್ನು ಎರಡನೇ ಬಾರಿಗೆ ಮಣಿಸಿದ್ದಾರೆ. ಮೂಲಕ ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ಗೆ ಒಂದೇ ಕ್ಲಾಸಿಕಲ್ ಟೂರ್ನಮೆಂಟ್ನಲ್ಲಿ ಎರಡು ಬಾರಿ ಸೋಲುಣಿಸಿದ ಸಾಧನೆ ಮಾಡಿದ್ದಾರೆ.

ಗೆಲುವಿನೊಂದಿಗೆ, ಕ್ಲಾಸಿಕಲ್ ಚೆಸ್ನಲ್ಲಿ ಕಾರ್ಲ್ಸನ್ ಅವರನ್ನು ಮೂರು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸೋಲಿಸಿದ ವಿಶ್ವದ ಅತ್ಯಂತ ಪ್ರಮುಖ ಗ್ರ್ಯಾಂಡ್ಮಾಸ್ಟರ್ಗಳ ಗಣ್ಯರ ಪಟ್ಟಿಗೆ ಪ್ರಜ್ಞಾನಂದ ಸೇರಿದ್ದಾರೆ.

error: Content is protected !!
Scroll to Top