ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ!

(ನ್ಯೂಸ್‌ ಕಡಬ) com,  ಜೂ.05: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.

ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ ಖಾತೆಯನ್ನೂ ತಾವೇ ಇಟ್ಟುಕೊಂಡಿದ್ದಾರೆ.

  • ಡಿಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
    * ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
    * ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
    * ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
    * ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
    * ಯು.ಟಿ ಖಾದರ್ – ಆರೋಗ್ಯ
    * ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
    * ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
    * ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
    * ಕೆ.ಎಚ್ ಮುನಿಯಪ್ಪ – ಆಹಾರ
    * ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
    * ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
    * ಬೈರತಿ ಸುರೇಶ್ – ಸಾರಿಗೆ
    * ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ
Scroll to Top