(ನ್ಯೂಸ್ ಕಡಬ) newskadaba.com ಜೂ. 05. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ ಪಕ್ಷದ ನಾಯಕತ್ವಕ್ಕೆ ಧನ್ಯವಾದಗಳು. ಆದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಹೇಳಿದರು.













