(ನ್ಯೂಸ್ ಕಡಬ) newsksdaba.com ಜೂ. 05. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಮಂಗಳೂರು ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್ ಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (DTDM), ಡಿಪ್ಲೊ
ಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ (DPM) ಮತ್ತು ಡಿಪ್ಲೊಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲನಿರ್ಂಗ್ (AIML) ಕೋರ್ಸ್ ಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ.
ವಿದ್ಯಾರ್ಥಿಗಳು ಜೂನ್ 4 ರಿಂದ ನೇರವಾಗಿ ಮಂಗಳೂರು ಜಿ.ಟಿ.ಟಿ.ಸಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಖಾಲಿ ಇರುವ ಸೀಟುಗಳನ್ನು “ಮೊದಲು ಬರುವವರಿಗೆ ಮೊದಲ ಆದ್ಯತೆ” ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಈ ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಅವಧಿಯಲ್ಲಿ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಕಡ್ಡಾಯ ಇಂಟರ್ನ್ ಶಿಪ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇಂಟರ್ನ್ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 18 ಸಾವಿರದಿಂದ 23 ಸಾವಿರದವರೆಗೆ ಸ್ಟೈಫಂಡ್ ನೀಡಲಾಗುತ್ತದೆ. ಎಸ್.ಎಸ್.ಎಲ್.ಸಿ. ಪಾಸ್ ಆದ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ 0824-2408003 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









