(ನ್ಯೂಸ್ ಕಡಬ) newsksdaba.com ಜೂ. 05. ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ವ್ಯಕ್ತಿಯೋರ್ವನನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂದನಕ್ಕೆ ಒಳಪಡಿಸಿರುವ ಘಟನೆ ನಗರದ ಕೆಪಿಟಿ ಜಂಕ್ಷನ್ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಈಶ್ವರ ನಾಗು ಮರಾಠಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 3 ಕಿ.ಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು.









