ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರಕಾರ ಇವರು 2026ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರದಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
     







ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳು ಅರ್ಜಿಯನ್ನು ಆನ್ಲೈನ್ (https://awards.gov.in) ಮೂಲಕ ಸಲ್ಲಿಸಬಹುದು.
       






ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ (ದೂರವಾಣಿ ಸಂಖ್ಯೆ: 0824-2440004)  ಸಂಪರ್ಕಿಸಬಹುದು  ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top