ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ



(ನ್ಯೂಸ್‌ ಕಡಬ) newskadaba.com ಜೂ. 06. ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್‌ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ.







 

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಚೆಕ್ ಇನ್, ಚೆಕ್ ಔಟ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದ್ದು, ಸಿಎಂ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ.






error: Content is protected !!
Scroll to Top