ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.21. ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೇ 22 ಮಂಗಳವಾರದಂದು ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ 8.30 ಕ್ಕೆ ಧರ್ಮಸ್ಥಳ ವಸಂತ ಮಹಲ್ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿರುವ ಕುಮಾರಸ್ವಾಮಿ ಶ್ರೀ ಕ್ಷೇತ್ರ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 11.45 ಕ್ಕೆ ವಸಂತ ಮಹಲ್ ಹೆಲಿಪ್ಯಾಡ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೆಣಸೆ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ತೆರಳಿ ಶೃಂಗೇರಿ ಶಾರದಾಂಬಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Scroll to Top