ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು.

ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಎಸ್ ಬಾಲಕೃಷ್ಣ ಕೊಯಿಲ ವಹಿಸಿದ್ದರು. ಶ್ರವಣ ತಜ್ಞ ಡಾ। ಪವನ್ ಮಂಗಳೂರು, ಟೀಮ್ ಈಶ್ವರ ಮಲ್ಪೆ ಸಂಚಾಲಕ ಲವ ಬಂಗೇರ ಭಾಗವಹಿಸಿದ್ದರು. ಕಡಬ ಕಾರ್ಯನಿರತ ಪತ್ರಕರ್ತ ಮಾಜಿ ಅಧ್ಯಕ್ಷ ನಾಗರಾಜ್ ಯನ್ ಕೆ ಸ್ವಾಗತಿಸಿ, ವಂದಿಸಿದರು. ಪತ್ರಕರ್ತರ ಸಂಘದ ಜೊತೆ ಕಾರ್ಯದರ್ಶಿ ಸುಧಾಕರ ಆಚಾರ್ಯ ಕಾಣಿಯೂರು, ದಿವಾಕರ ಎಂ, ಪ್ರಶಾಂತ್ ನೆಲ್ಯಾಡಿ, ಕೋಶಾಧಿಕಾರಿ ಪ್ರವೀಣ್ ರಾಜ್ ಕೊಯಿಲ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Scroll to Top