ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ



(ನ್ಯೂಸ್ ಕಡಬ) newskadaba.com ಜೂ. 08. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಜೂನ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.







ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು.






ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು. ಅರ್ಜಿದಾರರ ಕುಟುಂಬವು ವಸತಿರಹಿತರಾಗಿದ್ದು, ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು.

ಶಿಥಿಲಗೊಂಡ ಮನೆ ಅಥವಾ ಗುಡಿಸಲಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ. ಅರ್ಜಿದಾರರು ಕಡ್ಡಾಯವಾಗಿ ಸ್ವಂತ ನಿವೇಶನವನ್ನು ಹೊಂದಿದ್ದು, ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು.(ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯನ್ವಯ ಜಿಲ್ಲಾ ಸಮಿತಿಯಿಂದ ನೀಡಲಾದ ಹಕ್ಕು ಪತ್ರ ಪಡೆದಿದ್ದಲ್ಲಿ ವಸತಿ ಸೌಕರ್ಯ ಪಡೆಯಲು ಪರಿಗಣಿಸಬಹುದಾಗಿದೆ.)

ರಾಜೀವ್ ಗಾಂಧಿ ವಸತಿ ನಿಗಮದ ಮನೆ ಮಾರ್ಗಸೂಚಿ ಪ್ರಕಾರ ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ರಾಜೀವ್ ಗಾಂಧಿ ವಸತಿ ನಿಗಮದಿಂದ/ಪ.ಜಾತಿ ಅಲೆಮಾರಿ ಅಭಿವೃದ್ಧಿ ಕೋಶದಿಂದ ಅಥವಾ ಸರ್ಕಾರದ ಇತರೆ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಅರ್ಜಿದಾರರು/ಅವಲಂಬಿತ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.

 

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು: ಇತ್ತೀಚಿನ ಜಾತಿ & ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಇತ್ತೀಚಿನ ಭಾವಚಿತ್ರ-2, ಆಧಾರ್ ಕಾರ್ಡ್, ಗುರುತಿನ ಚೀಟಿ, ಪಾನ್ ಕಾರ್ಡ್ ಜೆರಾಕ್ಸ್ ಪ್ರತಿ. ಆಹಾರ ಪಡಿತರ ಚೀಟಿ (ಬಿಪಿಎಲ್). ಬ್ಯಾಂಕ್ ಪಾಸ್ ಪುಸ್ತಕ (ಖಾತೆ ಸಂಖ್ಯೆ ಇರುವ ಮುಖಪುಟಕ್ಕೆ ಅರ್ಜಿದಾರರು ಸ್ವಯಂ ದೃಢೀಕರಣ ಮಾಡಿರಬೇಕು ಹಾಗೂ ಆಧಾರ್ ಲಿಂಕ್ ಆಗಿರಬೇಕು).

ನಿವೇಶನದ ಹಕ್ಕು ಪತ್ರ ಅಥವಾ ನಿವೇಶನದ ಖಾತೆಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಯಿಂದ ಪಡೆದು ಸಲ್ಲಿಸಬೇಕು. ಅರ್ಜಿದಾರರು ರಾಜೀವ್ ಗಾಂಧಿ ವಸತಿ ನಿಗಮದಿಂದ ಅಥವಾ ಸರ್ಕಾರದ ಇತರೆ ವಸತಿ ಯೋಜನೆಗಳಡಿ ಆಯ್ಕೆಯಾಗಿ ವಸತಿ ಸೌಕರ್ಯವನ್ನು ಪಡೆಯದೇ ಇರುವ ಬಗ್ಗೆ ಹಾಗೂ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಸ್ವಂತ ಮನೆಯನ್ನು ಹೊಂದಿಲ್ಲದೇ ಇರುವ ಬಗ್ಗೆ ಸಂಬಂಧಪಟ್ಟ ಅನುಷ್ಟಾನಾಧಿಕಾರಿಯವರಿಂದ (ಗ್ರಾಮ ಪಂಚಾಯತಿ/ಮಹಾನಗರ ಪಾಲಿಕೆ/ನಗರ ಸ್ಥಳೀಯ ಸಂಸ್ಥೆಯವರಿಂದ) ದೃಢೀಕೃತ ಪತ್ರವನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ನಮೂನೆಯನ್ನು ನಗರದ ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಉಪ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ: 0824-2451237/9480843030), ಮಂಗಳೂರು(9480843114), ಬಂಟ್ವಾಳ (9480843112),  ಬೆಳ್ತಂಗಡಿ (9480843113), ಪುತ್ತೂರು (9480843115),  ಸುಳ್ಯ (9480843116)  ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಎಲ್ಲಾ ಗ್ರಾಮ ಪಂಚಾಯತ್‍ ಗಳಲ್ಲಿ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top