ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 08. ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
 







ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಕಾಲಾವಕಾಶ ನೀಡಲಾಗಿದೆ. ಆದುದರಿಂದ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ಹಳೆಯ ಕಚ್ಛಾಮನೆ ಉಳ್ಳವರು) ಹಾಗೂ ನಿವೇಶನರಹಿತ ಮಹಿಳೆಯರು, ಹಿರಿಯ ನಾಗರೀಕರು, ವಿಧುರರು, ವಿಶೇಷ ಚೇತನರು ಹಾಗೂ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು.      
     






ಅರ್ಜಿದಾರರು ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೋಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು, ನಿವೇಶನ/ಹಳೆಯ ಕಚ್ಛಾಮನೆ ದಾಖಲೆಗಳೊಂದಿಗೆ ಸ್ವಂತವಾಗಿ/ಗ್ರಾಹಕ ಸೇವಾ ಕೇಂದ್ರಗಳಲ್ಲಿ/ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈನ್ ಮೂಲಕ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
   

ಹೆಚ್ಚಿನ ಮಾಹಿತಿಗೆ ಮಂಗಳೂರು ಮಹಾನಗರಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶ ವಿಭಾಗವನ್ನು ಸಂಪರ್ಕಿಸುವಂತೆ ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!
Scroll to Top