(ನ್ಯೂಸ್ ಕಡಬ) newskadaba.com, ಜೂ.09 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 10ರಿಂದ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಜೂನ್ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದ್ದು, ಕಡಬದಲ್ಲಿ ಗರಿಷ್ಠ 27.3 ಮಿ.ಮೀ. ಹಾಗೂ ಪುತ್ತೂರಿನಲ್ಲಿ 11.3 ಮಿ.ಮೀ. ಮಳೆಯಾಗಿದೆ. ಉಳಿದಂತೆ ಬೆಳ್ತಂಗಡಿ, ಸುಳ್ಯ, ಉಳ್ಳಾಲ, ಬಂಟ್ವಾಳ, ಮಂಗಳೂರು, ಮೂಲ್ಕಿ ಮತ್ತು ಮೂಡುಬಿದಿರೆ ತಾಲೂಕುಗಳಲ್ಲೂ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.









