ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು



(ನ್ಯೂಸ್‌ ಕಡಬ) newskadaba.com,  ಜೂ.09 ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ವಾಪಸ್ಸು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬಂಟ್ವಾಳದ ಪುದು ಗ್ರಾಮದ 10ನೇ ಮೈಲುಗಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.







ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ವಿಕಾಸ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.






ಬಸ್‌ನಲ್ಲಿದ್ದ ಇತರ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!
Scroll to Top