ಬೆಳ್ತಂಗಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ: ಮೂವರು ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.09 ಬೆಳ್ತಂಗಡಿ: ಇಲ್ಲಿನ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಅಪಘಾತದ ವೇಳೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವೇೂಡನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top