ಧರ್ಮಸ್ಥಳದಲ್ಲಿ ಬಂದಿಳಿದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.22. ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ್ದು, ಜಿಲ್ಲಾ ಎಸ್ಪಿ ಡಾ.ಬಿ.ಆರ್.ರವೀಕಾಂತೇ ಗೌಡ ಸ್ವಾಗತಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಳಕ್ಕೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿಗೆ ಬಂದಿಳಿದ ಕುಮಾರಸ್ವಾಮಿ ಅವರನ್ನು ದೇವಸ್ಥಾನದ ವತಿಯಿಂದ ರಸ್ತೆ ಮಾರ್ಗವಾಗಿ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Also Read  ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ಜಾಮೀನು ಮಂಜೂರು

error: Content is protected !!
Scroll to Top