(ನ್ಯೂಸ್ ಕಡಬ) newskadaba.com, ಜೂ.10 ಮಂಗಳೂರು: ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿವೆ. ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ‘ಗ್ಲೋಬಲ್ ಎಜುಕೇಶನ್ ಸಮ್ಮಿಟ್’ ನಲ್ಲಿ ಸಂಸ್ಥೆಗೆ ಮೂರು ಜಾಗತಿಕ ಪ್ರಶಸ್ತಿಗಳು ಲಭಿಸಿವೆ.
ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಧುರಕಿಜ್ ಪುಂಡಿತ್ ವಿಶ್ವವಿದ್ಯಾಲಯ ಸೇರಿದಂತೆ ಪ್ರಮುಖ ಜಾಗತಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಶೃಂಗಸಭೆಯಲ್ಲಿ, ಶ್ರೀನಿವಾಸ ಸಂಸ್ಥೆಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಈ ಕೆಳಗಿನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು:
Global Excellence Award in Higher Education and Research – ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ
Excellence in Industry Integrated Technical Education Award – ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ (SIT)
Visionary Education Leader Award – ಡಾ. ಶ್ರೀನಿವಾಸ ಮಯ್ಯ ಡಿ (ಪ್ರಾಂಶುಪಾಲರು, SIT) ಅವರಿಗೆಸಂಸ್ಥೆಯ ಪರವಾಗಿ ಭಾಗವಹಿಸಿದ್ದ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ ಹಾಗೂ ತರಬೇತಿ ಮತ್ತು ನೇಮಕಾತಿ ಅಧಿಕಾರಿ ಡಾ. ಧೀರಜ್ ಹೆಬ್ರಿ ಅವರು ಸಂಸ್ಥೆಯ ಸಾಧನೆಗಳನ್ನು ಜಾಗತಿಕ ವೇದಿಕೆಯಲ್ಲಿ ಮಂಡಿಸಿದರು. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕುಲಾಧಿಪತಿ ಡಾ. ಶ್ರೀನಿವಾಸ ರಾವ್, ಕುಲಪತಿ ಡಾ. ಸತ್ಯನಾರಾಯಣ ರೆಡ್ಡಿ, ಕುಲಸಚಿವರಾದ ಡಾ. ಅನಿಲ್ ಕುಮಾರ್ ಮತ್ತು ಡಾ. ಅಜಯ್ ಕುಮಾರ್ ಉಪಸ್ಥಿತರಿದ್ದರು.









