(ನ್ಯೂಸ್ ಕಡಬ) newskadaba.com ಜೂ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳು, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಬೆಳಿಗ್ಗೆ 9:30 ಗಂಟೆಗೆ ಉರ್ವಾಸ್ಟೋರ್ ಸರ್ಕಲ್ ನಿಂದ ಕೊಟ್ಟಾರ ದ.ಕ ಜಿಲ್ಲಾ ಪಂಚಾಯತ್ ಆವರಣದವರೆಗೆ ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಮಿಕ ಆಯುಕ್ತರ ನಿರ್ದೇಶನದಂತೆ, ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಜೂನ್ 13 ರಿಂದ ಜೂನ್ 30 ರವರೆಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರಿಂದ ವಿವಿಧ ಸಂಸ್ಥೆಗಳಿಗೆ ಅನಿರೀಕ್ಷಿತ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ದುಡಿಯುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ ಹೆಲ್ಪ್ ಲೈನ್ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರ ಪ್ರಕಟಣೆ ತಿಳಿಸಿದೆ.
ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ









