ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

(ನ್ಯೂಸ್ಕಡಬ) newskadaba.com, ಜೂ.11 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಆದೇಶಿಸಿದ್ದಾರೆ.

ಮುಂಗಾರು ಮಳೆ ಮತ್ತು ಗಾಳಿಗೆ ಇವು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆಯಿದೆ.ಡಿವೈಡರ್‌ಗಳ ಮೇಲಿನ ಬ್ಯಾನರ್‌ಗಳಿಂದಾಗಿ ರಸ್ತೆ ದಾಟುವವರಿಗೆ ಮತ್ತು ವಾಹನ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿವೆ ಎಂಬ ದೂರುಗಳು ಬಂದಿದ್ದವು.

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ತಕ್ಷಣವೇ ಇವುಗಳನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

Scroll to Top