ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಪೊಲೀಸ್ ವಶಕ್ಕೆ!

(ನ್ಯೂಸ್ಕಡಬ) newskadaba.com,   ಜೂ. 12 ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬುವವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸಹೋದರಿಯ ನಿವಾಸದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.’ಬಿರುವೆರ್ ಕುಡ್ಲ’ ಸಂಘಟನೆಯ ರಾಕೇಶ್ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Scroll to Top