(ನ್ಯೂಸ್ ಕಡಬ) newskadaba.com, ಜೂ. 12 ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರ ಜೊತೆಗೆ ಗಂಡುಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಗ್ಯಾರಂಟಿ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ವಾಪಸ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.ವಿದ್ಯಾರ್ಥಿಗಳು ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕಚೇರಿಗಳಲ್ಲಿ ನಿಗದಿತ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿಗಳ ಪರಿಶೀಲನೆ ನಡೆಸಿದ ಬಳಿಕ ಉಚಿತ ಪಾಸ್ ವಿತರಿಸಲಾಗುವುದು.
ಆರ್ಥಿಕ ಹೊರೆ ಇಲ್ಲದೆ ಪ್ರತಿಯೊಬ್ಬ ಮಗುವೂ ವಿದ್ಯಾಭ್ಯಾಸ ಮಾಡಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಈ ಯೋಜನೆ ಜಾರಿಗೆ ತಂದಿದ್ದು, ಸಾರಿಗೆ ಇಲಾಖೆ ಶೀಘ್ರದಲ್ಲೇ ಇದರ ಅಧಿಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.









