ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಠಾಣಾ ವ್ಯಾಪ್ತಿಯ ಮೀನಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಭರತ್(26) ಎಂದು ಗುರುತಿಸಲಾಗಿದೆ. ಈತ ಮಂಗಳವಾರದಂದು ತನ್ನ ಮನೆಯಲ್ಲಿ ಎಂಡೋಸಲ್ಫಾನ್ ಸೇವಿಸಿದ್ದು, ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  Types of Corporate Governance

error: Content is protected !!
Scroll to Top