ಮಳೆಗಾಲದ ನಡುವೆ ಹೆಚ್ಚಿದ ಸಾಂಕ್ರಾಮಿಕ ರೋಗದ ಭೀತಿ: ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್‌ನ ಹದಗೆಟ್ಟ ಸ್ಥಿತಿಗೆ ಯಾರು ಹೊಣೆ?

(ನ್ಯೂಸ್ಕಡಬ) newskadaba.com,   ಜೂ. 12  ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಆವರಣದಲ್ಲಿ ತಿಂಗಳುಗಳಿಂದ ಪ್ಲಾಸ್ಟಿಕ್ ಹಾಗೂ ಆಹಾರದ ತ್ಯಾಜ್ಯ ಸಂಗ್ರಹವಾಗಿದ್ದು, ಮಳೆಯಿಂದಾಗಿ ಕೊಳೆತು ದುರ್ವಾಸನೆ ಹರಡುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತರಲ್ಲಿ ಕೆಟ್ಟ ಅಭಿಪ್ರಾಯ ಮೂಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.ಬಿಳಿನೆಲೆ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ.

ರೈಲ್ವೆ ಇಲಾಖೆ ಹಾಗೂ ಜಿಲ್ಲಾ ಆಡಳಿತ ತಕ್ಷಣ ಸಮನ್ವಯ ಸಾಧಿಸಿ ಸಂಪೂರ್ಣ ಸ್ವಚ್ಛತೆ ಹಾಗೂ ನಿಯಮಿತ ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Scroll to Top