ಓದದವರಿಗೂ SSLC, PUC, ಪದವಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಕಿಂಗ್‌ಪಿನ್ ರಾಜಾರೆಡ್ಡಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,   ಜೂ. 12 :: ಓದದೇ ಇರುವವರಿಗೆ SSLC, PUC ಮತ್ತು ಪದವಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಕೋರಮಂಗಲದಲ್ಲಿ ‘ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್’ ಹೆಸರಿನಲ್ಲಿ ನಕಲಿ ಕಚೇರಿ ಇಟ್ಟುಕೊಂಡಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಬಂಧಿತ.

ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು ರೆಡಿ ಮಾಡಿ DTDC ಕೊರಿಯರ್ ಮೂಲಕ ಮನೆಗೆ ಕಳುಹಿಸುತ್ತಿದ್ದನು.ತನಿಖೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ನಕಲಿ ಕಾರ್ಡ್‌ಗಳು ಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಆರ್ಯನ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Scroll to Top