‘ನಿಪಾಹ್ ವೈರಸ್’: ದಕ್ಷಿಣ ಕನ್ನಡದಾದ್ಯಂತ ಹೈ ಅಲೆರ್ಟ್ ► ದ.ಕ.ದಲ್ಲಿ ಯಾವುದೇ ಪ್ರಕರಣ ದೃಢಪಟ್ಟಿಲ್ಲ: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ನಿಪಾಹ್ ವೈರಸ್ ದೃಢಪಟ್ಟಿಲ್ಲವಾದರೂ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಶಯದ ದೃಷ್ಟಿಯಿಂದ ಇಬ್ಬರು ರೋಗಿಗಳ ಬಗ್ಗೆ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಜ್ಜುಗೊಳಿಸುವಂತೆ ಹಾಗೂ ಕೇರಳ ಮೂಲದವರು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಆಗಮಿಸುವುದರಿಂದ ರೈಲ್ವೇ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಸೆಂಟರ್ ಸ್ಥಾಪಿಸಲು ಆರೋಗ್ಯಾಧಿಕಾರಿಯವರಿಗೆ ಯು.ಟಿ.ಖಾದರ್ ಸೂಚಿಸಿದ್ದಾರೆ. ಜ್ವರ, ತಲೆನೋವು ಕಂಡುಬಂದರೆ ತಡಮಾಡದೆ ತಕ್ಷಣ ವೈದ್ಯರನ್ನು ಕಂಡು ಸೂಕ್ತಚಿಕಿತ್ಸೆ ಪಡೆಯಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

Also Read  ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top