(ನ್ಯೂಸ್ ಕಡಬ) newskadaba.com,ಜೂ.12 ಬಂಟ್ವಾಳ:ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಮಧ್ಯಾಹ್ನ 1:40ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಿಎಂ ಆದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದಿಳಿದ ತಮ್ಮ ನೆಚ್ಚಿನ ನಾಯಕನನ್ನು ನೋಡಲು ವಿಮಾನ ನಿಲ್ದಾಣದ ಹೊರಗೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.
ಅಭಿಮಾನಿಗಳ ಹರ್ಷೋದ್ಗಾರ, ಶಿಳ್ಳೆ ಹಾಗೂ ಚಪ್ಪಾಳೆಗಳ ಸ್ವಾಗತಕ್ಕೆ ನಗುಮುಖದಿಂದಲೇ ಕೈಬೀಸಿ ಪ್ರತಿಕ್ರಿಯಿಸಿದ ವಿಜಯ್, ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರಯಾಣ ಬೆಳೆಸಿದರು. ಇವರ ಈ ಭೇಟಿಯು ರಾಜಕೀಯ ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.









