ಹಿರಿಯ ನಟ ದೊಡ್ಡಣ್ಣ ನಿಧನ ವಾರ್ತೆ ಸುಳ್ಳು: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ “ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ನಂಬಬೇಡಿ”



(ನ್ಯೂಸ್‌ ಕಡಬ) newskadaba.com,ಜೂ.12 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟಪಡಿಸಿದ್ದಾರೆ.







ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, “ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಗ್ಗಿನಿಂದಲೇ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಆತಂಕದಿಂದ ಕರೆ ಮಾಡುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿ ಹಬ್ಬಿಸಿದ ಅವಿವೇಕಿಗಳನ್ನು ಸುಮ್ಮನೆ ಬಿಡುವುದಿಲ್ಲ; ಅವರನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆ ಕೊಡಿಸುತ್ತೇನೆ” ಎಂದು ಆಕ್ರೋಶ ಹೊರಹಾಕಿದ್ದಾರೆ.






error: Content is protected !!
Scroll to Top