(ನ್ಯೂಸ್ ಕಡಬ) newskadaba.com, ಜೂ.13 : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ಉಡುಪಿಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲಗಳೊಂದಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನು ವಿಶೇಷ ಕಾಣಿಕೆಯಾಗಿ ಸಮರ್ಪಿಸಿದರು.ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ನಡೆದ ಸಂಕಲ್ಪ ಪೂಜೆ ಹಾಗೂ ನಿತ್ಯದ ದೀಪಾರಾಧನೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿದ್ದು, ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.









