ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ!

(ನ್ಯೂಸ್ಕಡಬ) newskadaba.com,  ಜೂ.16 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ನೀಡಿ ಗೌರವಿಸಲಾಗಿದೆ.

ಸ್ಲೋವಾಕಿಯಾದ ಅಧ್ಯಕ್ಷರಾದ ಪೀಟರ್ ಪೆಲ್ಲೆಗ್ರಿನ್ ಅವರು ಬ್ರಾಟಿಸ್ಲಾವಾದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಹಸ್ತಾಂತರಿಸಿದರು.ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಹಾಗೂ ಜಾಗತಿಕ ರಾಜತಾಂತ್ರಿಕತೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಅವರ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಪ್ರಶಸ್ತಿ ಸ್ವೀಕರಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ, “ಈ ಗೌರವವು ಭಾರತದ 140 ಕೋಟಿ ಜನರಿಗೆ ಸಂದಿದ್ದಾಗಿದೆ. ಇದನ್ನು ಉಭಯ ದೇಶಗಳ ಮುರಿದ ಕೊಂಡಿಯಂತಿರುವ ಶಾಶ್ವತ ಸ್ನೇಹಕ್ಕೆ ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

Scroll to Top