ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಜೂ.16 : ಪುಕ್ಕೇರಿ ಬೈಪಾಸ್‌ನಲ್ಲಿ ಸೋಮವಾರ ಬೆಳಿಗ್ಗೆ ಬೆಕ್ಕನ್ನು ರಕ್ಷಿಸಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಅರ್ಚಕ ನಾರಾಯಣ ಭಟ್ಟ (48) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ತಕ್ಷಣವೇ ಕಾರ್ಯಾಚರಣೆ ಆರಂಭಿಸಿತು. ಸಿಬ್ಬಂದಿ ರೂಪೇಶ್ ಅವರು ಬಾವಿಗೆ ಇಳಿದು ಅರ್ಚಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಈ ಜಂಟಿ ಕಾರ್ಯಾಚರಣೆಯಲ್ಲಿ ದಿನೇಶ್, ಭೀಮಪ್ಪ, ಗಣೇಶ್, ಸುರೇಶ್ ಹಾಗೂ ಚಾಲಕ ಮುಜಾಮೀರ್ ಸಹಕರಿಸಿದರು.

Scroll to Top