ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ‌ ಅಡ್ಡಿಯಾದ ಮಳೆ ► ಮಳೆಗೆ ನೆನೆದು ಸಮಾರಂಭಕ್ಕಾಗಿ ಕಾಯುತ್ತಿರುವ ಜೆಡಿಎಸ್ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.23. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಳೆ ಅಡ್ಡಿಯಾಗಿದೆ.

ಸಂಜೆ‌ 4.30 ಕ್ಕೆ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಮಳೆಯ ಸಿಂಚನ ಅಡ್ಡಿಯಾಗಿದ್ದು, ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಕುಗ್ಗಿಸಿದೆ. ಆದರೂ ವಿಧಾನಸೌಧದ ಬಳಿ ಹೆಚ್​ಡಿಕೆ ಪದಗ್ರಹಣ ಕಾರ್ಯಕ್ರಮಕ್ಕಾಗಿ ಸಾವಿರಾರು ಕಾರ್ಯಕರ್ತರು ಕಾಯುತ್ತಿರುವ ದೃಶ್ಯ ಕಂಡುಬಂದಿದ್ದು, ವಿಧಾನಸೌಧದ ಮೆಟ್ರೋ ಸ್ಟೇಷನ್​ನಲ್ಲಿ ಮಳೆಯಿಂದ ಆಶ್ರಯ ಪಡೆಯುತ್ತಿದ್ದಾರೆ.

Also Read  ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

error: Content is protected !!
Scroll to Top