(ನ್ಯೂಸ್ ಕಡಬ) newskadaba.com, ಜೂ.16 ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು
ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ನಟ, ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾ ಭಾರತ’ ಖ್ಯಾತಿಯ ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದ ಖಾಲಿ ಜಾಗವೊಂದರಲ್ಲಿ ಇವರ ಮೃತದೇಹ ಪತ್ತೆಯಾಗಿದೆ.
ಮೃತದೇಹದ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ಇದು ಕೊಲೆ ಇರಬಹುದು ಎಂದು ಶಂಕಿಸಿದ್ದು, ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿರಬಹುದು ಎಂಬ ಅನುಮಾನಗಳೂ ವ್ಯಕ್ತವಾಗಿವೆ. ಘಟನಾ ಸ್ಥಳಕ್ಕೆ ಹುಮ್ನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.













