ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ



(ನ್ಯೂಸ್‌ ಕಡಬ) newskadaba.com,  ಜೂ.17: ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದ ದಾವಣಗೆರೆಯ ಪ್ರತಿಭಾನ್ವಿತ ಯುವಕ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.







ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿ ಮನೆಗೆ ಮರಳಿದ್ದ ಸುಶೀಲ್, ತಲೆಸುತ್ತು ಬರುತ್ತಿದೆ ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋ ಬಿಪಿ  ಉಂಟಾಗಿ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.






ಮೃತ ಸುಶೀಲ್ ಕುಮಾರ್ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಅಲ್ಲದೆ, ಸ್ಥಳೀಯ ಯುವಕರಿಗೆ ಉಚಿತವಾಗಿ ತರಬೇತಿ ನೀಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಯುವ ಸಾಧಕನ ಅಕಾಲಿಕ ಮರಣದಿಂದ ಕುಟುಂಬಸ್ಥರ ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.

error: Content is protected !!
Scroll to Top