ಕಬಕ: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ► ನಗ, ನಗದಿನೊಂದಿಗೆ ಪರಾರಿ



(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.23. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲ ಚಿಲಕ ಒಡೆದು ಒಳನುಗ್ಗಿದ ಕಳ್ಳರು ನಗ, ನಗದನ್ನು ದೋಚಿರುವ ಘಟನೆ ಪುತ್ತೂರಿನ ಕಬಕದಲ್ಲಿ ಮಂಗಳವಾರದಂದು ನಡೆದಿದೆ.







ಕಬಕ ಗ್ರಾಮದ ಪೋಳ್ಯದಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಮನೆಯಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದ ನಡುವೆ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ಮನೆಯಲ್ಲಿಟ್ಟಿದ್ದ ಮೂರೂವರೆ ಪವನ್ ಚಿನ್ನಾಭರಣ ಹಾಗೂ ಅರುವತ್ತು ಸಾವಿರ ರೂ. ನಗದನ್ನು ದೋಚಿದ್ದಾರೆ. ಮನೆಯವರು ಅಪರಾಹ್ನ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಳವಾದ ಸ್ವತ್ತುಗಳ ಒಟ್ಟು ಮೌಲ್ಯ ಒಂದು ಲಕ್ಷದ ಹತ್ತು ಸಾವಿರ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಅಬ್ದುಲ್ ರಹಿಮಾನ್ ರ ಪುತ್ರ ಮಹಮ್ಮದ್ ತಾಹಿರ್ ನೀಡಿದ ದೂರಿನಂತೆ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top