ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ

(ನ್ಯೂಸ್‌ ಕಡಬ) newskadaba.com,ಜೂ.20 ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣವೇ ದುರಸ್ತಿ ಹಾಗೂ ಡಾಮರೀಕರಣ ಕಾಮಗಾರಿ ಕೈಗೊಳ್ಳುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ.

ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದಿರುವುದರಿಂದ ಪ್ರತಿದಿನ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ ಭಯ ಹೆಚ್ಚಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Scroll to Top